ADVERTISEMENT

8 ತಿಂಗಳ ಗರಿಷ್ಠ ಮಟ್ಟಕ್ಕೆ ತಯಾರಿಕಾ ವಲಯದ ಚಟುವಟಿಕೆ

ಪಿಟಿಐ
Published 1 ಆಗಸ್ಟ್ 2022, 11:23 IST
Last Updated 1 ಆಗಸ್ಟ್ 2022, 11:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದ ತಯಾರಿಕಾ ವಲಯದ ಚಟುವಟಿಕೆಯು ಜುಲೈ ತಿಂಗಳಲ್ಲಿ ಎಂಟು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ ಎಂದು ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ಇಂಡಿಯಾ ಸಂಸ್ಥೆ ಸೋಮವಾರ ಹೇಳಿದೆ.

ಮ್ಯಾನುಫ್ಯಾಕ್ಚರಿಂಗ್‌ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ ಜೂನ್‌ನಲ್ಲಿ 53.9ರಷ್ಟು ಇದ್ದಿದ್ದು ಜುಲೈನಲ್ಲಿ 56.4ಕ್ಕೆ ಏರಿಕೆ ಕಂಡಿದೆ. ಹೊಸ ಯೋಜನೆಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ಅದು ತಿಳಿಸಿದೆ.

ಜೂನ್‌ನಲ್ಲಿ ವಲಯದ ಬೆಳವಣಿಗೆಯು 9 ತಿಂಗಳ ಕನಿಷ್ಠ ಮಟ್ಟಕ್ಕೆ ತಲುಪಿತ್ತು. ಸತತವಾಗಿ 13ನೇ ತಿಂಗಳಿನಲ್ಲಿಯೂ ವಲಯದ ಒಟ್ಟಾರೆ ಸ್ಥಿತಿಯು ಸಕಾರಾತ್ಮಕ ಮಟ್ಟದಲ್ಲಿಯೇ ಇದೆ ಎನ್ನುವುದನ್ನು ಜುಲೈ ತಿಂಗಳ ಅಂಕಿ–ಅಂಶವು ಸೂಚಿಸಿದೆ. ಸೂಚ್ಯಂಕವು 50ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದು ಸಕಾರಾತ್ಮಕ ಬೆಳವಣಿಗೆ.

ADVERTISEMENT

ಜುಲೈನಲ್ಲಿ ಆರ್ಥಿಕತೆಯು ವೇಗದ ಬೆಳವಣಿಗೆ ಕಂಡಿರುವುದು ಹಾಗೂ ಹಣದುಬ್ಬರ ತುಸು ಕಡಿಮೆ ಆಗಿರುವುದರಿಂದ ತಯಾರಿಕಾ ವಲಯದ ಚಟುವಟಿಕೆಗಳು ಉತ್ತಮ ಬೆಳವಣಿಗೆ ಕಂಡಿವೆ ಎಂದು ಸಂಸ್ಥೆಯ ಅರ್ಥಶಾಸ್ತ್ರದ ಸಹಾಯಕ ನಿರ್ದೇಶಕಿ ಪಾಲಿಯಾನ ಡಿ. ಲಿಮಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.