ADVERTISEMENT

ದೇಶದ ತಯಾರಿಕಾ ವಲಯದ ಬೆಳವಣಿಗೆ: 8 ತಿಂಗಳ ಗರಿಷ್ಠ

ಪಿಟಿಐ
Published 2 ಏಪ್ರಿಲ್ 2025, 14:42 IST
Last Updated 2 ಏಪ್ರಿಲ್ 2025, 14:42 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದ ತಯಾರಿಕಾ ವಲಯದ ಬೆಳವಣಿಗೆಯು ಮಾರ್ಚ್‌ ತಿಂಗಳಲ್ಲಿ 8 ತಿಂಗಳ ಗರಿಷ್ಠ ಮಟ್ಟಕ್ಕೆ ದಾಖಲಾಗಿದೆ ಎಂದು ಎಸ್‌ ಆ್ಯಂಡ್‌ ಪಿ ಗ್ಲೋಬಲ್‌ ಸಂಸ್ಥೆ ತಿಳಿಸಿದೆ.

ಫೆಬ್ರುವರಿಯಲ್ಲಿ ಸೂಚ್ಯಂಕ 56.3 ರಷ್ಟಿತ್ತು. ಮಾರ್ಚ್‌ನಲ್ಲಿ 58.1 ದಾಖಲಾಗಿದೆ. ಹೆಚ್ಚಿದ ಬೇಡಿಕೆ ಮತ್ತು ಉತ್ಪಾದನೆಯಿಂದಾಗಿ ಸೂಚ್ಯಂಕವು ಏರಿಕೆ ಕಂಡಿದೆ ಎಂದು ತಿಳಿಸಿದೆ.

ಪರ್ಚೇಸಿಂಗ್‌ ಮ್ಯಾನೇಜರ್ಸ್ ಸೂಚ್ಯಂಕ (ಪಿಎಂಐ) ಆಧಾರದ ಮೇಲೆ ಲೆಕ್ಕ ಹಾಕುವ ಈ ಸೂಚ್ಯಂಕವು 50ರ ಮೇಲಿದ್ದರೆ ಸಕಾರಾತ್ಮಕ ಬೆಳವಣಿಗೆ ಎಂದು ಅರ್ಥೈಸಲಾಗುತ್ತದೆ. 50ಕ್ಕಿಂತ ಕಡಿಮೆ ಇದ್ದರೆ ನಕಾರಾತ್ಮಕ ಪ್ರಗತಿ ಎಂದು ಪರಿಗಣಿಸಲಾಗುತ್ತದೆ. 

ADVERTISEMENT

ಬೇಡಿಕೆ ಮತ್ತು ಉತ್ಪಾದನೆಯಲ್ಲಿನ ಇಳಿಕೆಯಿಂದಾಗಿ ಫೆಬ್ರುವರಿ ತಿಂಗಳಲ್ಲಿ ಈ ವಲಯದ ಪ್ರಗತಿ 14 ತಿಂಗಳ ಕನಿಷ್ಠ ಮಟ್ಟಕ್ಕೆ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.