ವಿದ್ಯುತ್
ನವದೆಹಲಿ: ಪ್ರಸಕ್ತ ವರ್ಷದ ಜನವರಿ ತಿಂಗಳಲ್ಲಿ ದೇಶದಲ್ಲಿ 13,749 ಕೋಟಿ ಯೂನಿಟ್ ವಿದ್ಯುತ್ ಬಳಕೆ ಆಗಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ.
2024ರ ಜನವರಿಯಲ್ಲಿ 13,394 ಕೋಟಿ ಯೂನಿಟ್ ವಿದ್ಯುತ್ ಬಳಕೆ ಆಗಿತ್ತು. ಇದಕ್ಕೆ ಹೋಲಿಸಿದರೆ ಶೇ 2.7ರಷ್ಟು ಮಾತ್ರ ಏರಿಕೆ ಆಗಿದೆ ಎಂದು ತಿಳಿಸಿದೆ.
ಜನವರಿಯಲ್ಲಿ ಹಗಲು ಮತ್ತು ರಾತ್ರಿ ವೇಳೆ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನವಿದ್ದರಿಂದ ಜನರು ಹೀಟರ್, ಗೀಸರ್ ಬಳಕೆ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಇದರಿಂದ ವಿದ್ಯುತ್ ಬೇಡಿಕೆ ಮತ್ತು ಬಳಕೆ ಪ್ರಮಾಣದಲ್ಲಿ ಕಡಿಮೆ ಆಗಿದೆ. ಫೆಬ್ರುವರಿಯಲ್ಲೂ ವಿದ್ಯುತ್ ಬಳಕೆ ಕಡಿಮೆ ಆಗಬಹುದು ಎಂದು ತಿಳಿಸಿದೆ.
ಪ್ರಸಕ್ತ ವರ್ಷದ ಬೇಸಿಗೆ ಅವಧಿಯಲ್ಲಿ ವಿದ್ಯುತ್ ಬೇಡಿಕೆಯು 270 ಗಿಗಾವಾಟ್‌ಗೆ ತಲುಪುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ಜನವರಿ ತಿಂಗಳಲ್ಲಿ 18.98 ಡಿಗ್ರಿ ಸೆಲ್ಸಿಯಸ್ ಸರಾಸರಿ ತಾಪಮಾನವಿತ್ತು. ಇದು 1901,1958 ಮತ್ತು 1990ರ ಬಳಿಕ ದಾಖಲಾದ ಹೆಚ್ಚಿನ ತಾಪಮಾನವಾಗಿದೆ.
ಫೆಬ್ರುವರಿಯಲ್ಲಿ ದೇಶದ ಬಹುತೇಕ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಕಡಿಮೆ ಮಳೆ ಆಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.