ನವದೆಹಲಿ: ದೇಶದ ಸೇವಾ ವಲಯದ ಚಟುವಟಿಕೆ ಸೆಪ್ಟೆಂಬರ್ ತಿಂಗಳಿನಲ್ಲಿ ಇಳಿಕೆಯಾಗಿದೆ ಎಂದು ಮಾಸಿಕ ಸಮೀಕ್ಷೆಯ ವರದಿಯೊಂದು ಸೋಮವಾರ ತಿಳಿಸಿದೆ.
ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಪಿಎಂಐ ಬ್ಯುಸಿನೆಸ್ ಆ್ಯಕ್ಟಿವಿಟಿ ಸೂಚ್ಯಂಕವು ಸೆಪ್ಟೆಂಬರ್‌ನಲ್ಲಿ 60.9 ದಾಖಲಾದೆ. ಇದು ಆಗಸ್ಟ್‌ನಲ್ಲಿ 62.9ರಷ್ಟಿತ್ತು. ಆಗಸ್ಟ್‌ನ ಮಟ್ಟವು 15 ವರ್ಷಗಳ ಗರಿಷ್ಠವಾಗಿತ್ತು.
ಪಿಎಂಐ ಸೂಚ್ಯಂಕವು 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಬೆಳವಣಿಗೆ ಎಂದು ಗುರುತಿಸಲಾಗುತ್ತದೆ.
‘ದೇಶದ ಸೇವಾ ವಲಯದ ಚಟುವಟಿಕೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆಯು ತೀವ್ರಗತಿಯಲ್ಲಿ ಹೆಚ್ಚುತ್ತಿಲ್ಲ. ಹೀಗಾಗಿ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಸೂಚ್ಯಂಕವು ಇಳಿಕೆ ಕಂಡಿದೆ’ ಎಂದು ಎಚ್‌ಎಸ್‌ಬಿಸಿ ಇಂಡಿಯಾದ ಮುಖ್ಯ ಅರ್ಥಶಾಸ್ತ್ರಜ್ಞೆ ಪ್ರಾಂಜುಲ್ ಭಂಡಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.