ನವದೆಹಲಿ: ಜನವರಿಯಲ್ಲಿ ದೇಶದ ಸೇವಾ ವಲಯದ ಚಟುವಟಿಕೆಗಳು ಎರಡು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಮಾರಾಟ ಮತ್ತು ಉತ್ಪಾದನೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ನಡುವೆಯೂ ಈ ವಲಯವು ಇಳಿಕೆ ದಾಖಲಿಸಿದೆ.
ಸೇವಾ ವಲಯದ ಚಟುವಟಿಕೆಯನ್ನು ಸೂಚಿಸುವ ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸ್ ಬ್ಯುಸಿನೆಸ್ ಸೂಚ್ಯಂಕವು, ಕಳೆದ ವರ್ಷದ ಡಿಸೆಂಬರ್‌ನಲ್ಲಿ 59.3 ಇತ್ತು. ಜನವರಿಯಲ್ಲಿ 56.5 ಇದೆ ಎಂದು ಬುಧವಾರ ಬಿಡುಗಡೆಯಾಗಿರುವ ಎಸ್ ಆ್ಯಂಡ್ ಪಿ ಗ್ಲೋಬಲ್ ಇಂಡಿಯಾ ಸಂಸ್ಥೆಯ ವರದಿ ತಿಳಿಸಿದೆ.
ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕವು (ಪಿಎಂಐ) 50ರ ಮೇಲಿದ್ದರೆ ಬೆಳವಣಿಗೆಯು ಸದೃಢವಾಗಿದೆ ಎಂದು ಅರ್ಥೈಸಲಾಗುತ್ತದೆ. 50ಕ್ಕಿಂತ ಕಡಿಮೆ ಇದ್ದರೆ ಬೆಳವಣಿಗೆಯು ಕುಂಠಿತವಾಗಿದೆ ಎಂದು ಹೇಳಲಾಗುತ್ತದೆ.
ಕಳೆದ ವರ್ಷದ ಮಧ್ಯಭಾಗದಿಂದಲೂ ಹೊಸ ರಫ್ತು ವ್ಯವಹಾರವು ಭಾಗಶಃ ಇಳಿಕೆಯಾಗಿದೆ. ಆದರೆ, ಡಿಸೆಂಬರ್‌ನಲ್ಲಷ್ಟೇ ಸೇವಾ ವಲಯದ ರಫ್ತು ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.