ನವದೆಹಲಿ: ದೇಶದ ಕೈಗಾರಿಕಾ ಉತ್ಪಾದನಾ ಪ್ರಗತಿಯು ಫೆಬ್ರುವರಿ ತಿಂಗಳಲ್ಲಿ ಶೇ 2.9ರಷ್ಟು ದಾಖಲಾಗಿದ್ದು, ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಶುಕ್ರವಾರ ತಿಳಿಸಿದೆ.
ಕಳೆದ ವರ್ಷದ ಫೆಬ್ರುವರಿಯಲ್ಲಿ ಶೇ 5.6ರಷ್ಟು ದಾಖಲಾಗಿತ್ತು. ತಯಾರಿಕಾ, ಗಣಿಗಾರಿಕೆ ಮತ್ತು ವಿದ್ಯುತ್ ವಲಯದಲ್ಲಿನ ಮಂದಗತಿ ಬೆಳವಣಿಗೆಯೇ ಇದಕ್ಕೆ ಕಾರಣ ಎಂದು ತಿಳಿಸಿದೆ.
ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಈ ಪ್ರಗತಿಯನ್ನು ಲೆಕ್ಕ ಹಾಕಲಾಗುತ್ತದೆ. ಗಣಿಗಾರಿಕೆ ಶೇ 1.6, ತಯಾರಿಕೆ ಶೇ 2.9 ಮತ್ತು ವಿದ್ಯುತ್ ವಲಯದ ಪ್ರಗತಿಯು ಶೇ 3.6ಕ್ಕೆ ಇಳಿದಿದೆ.
2024–25ನೇ ಆರ್ಥಿಕ ವರ್ಷದ ಏಪ್ರಿಲ್–ಫೆಬ್ರುವರಿಯಲ್ಲಿ ಐಐಪಿ ಬೆಳವಣಿಗೆ ಶೇ 4.1ರಷ್ಟಿದೆ. 2023–24ರ ಇದೇ ಅವಧಿಯಲ್ಲಿ ಶೇ 6ರಷ್ಟಿತ್ತು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.