ನವದೆಹಲಿ: ಕಳೆದ ವರ್ಷದ ಡಿಸೆಂಬರ್‌ನಲ್ಲಿ ದೇಶದ ಕೈಗಾರಿಕಾ ಉತ್ಪಾದನೆ ಬೆಳವಣಿಗೆಯು ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇ 3.2ರಷ್ಟು ದಾಖಲಾಗಿದೆ.
ಗಣಿಗಾರಿಕೆ ಮತ್ತು ತಯಾರಿಕಾ ವಲಯದ ಉತ್ಪಾದನೆಯಲ್ಲಿ ಇಳಿಕೆಯಾಗಿದೆ. ಇದೇ ಉತ್ಪಾದನೆ ಕುಸಿತಕ್ಕೆ ಕಾರಣ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಬುಧವಾರ ತಿಳಿಸಿದೆ.
2023ರ ಡಿಸೆಂಬರ್‌ನಲ್ಲಿ ಬೆಳವಣಿಗೆಯು ಶೇ 4.4ರಷ್ಟಿತ್ತು. ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಬೆಳವಣಿಗೆಯನ್ನು ಲೆಕ್ಕ ಹಾಕಲಾಗುತ್ತದೆ.
ಡಿಸೆಂಬರ್‌ನಲ್ಲಿ ತಯಾರಿಕಾ ವಲಯ ಶೇ 3 ಮತ್ತು ಗಣಿಗಾರಿಕೆ ಶೇ 2.6ರಷ್ಟು ಪ್ರಗತಿ ಕಂಡಿದೆ.
ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ಐಐಪಿ ಬೆಳವಣಿಗೆ ಶೇ 4ರಷ್ಟಾಗಿದೆ. 2023–24ರ ಇದೇ ಅವಧಿಯಲ್ಲಿ ಶೇ 6.3ರಷ್ಟಿತ್ತು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.