ADVERTISEMENT

ಕೈಗಾರಿಕಾ ಉತ್ಪಾದನೆ: ಶೇ 5.7ರಷ್ಟು ಬೆಳವಣಿಗೆ ದಾಖಲು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 15:38 IST
Last Updated 12 ಏಪ್ರಿಲ್ 2024, 15:38 IST
........
........   

ನವದೆಹಲಿ: ದೇಶದ ಕೈಗಾರಿಕಾ ಉತ್ಪಾದನೆಯು ಪ್ರಸಕ್ತ ವರ್ಷದ ಫೆಬ್ರುವರಿ ತಿಂಗಳಿನಲ್ಲಿ ಶೇ 5.7ರಷ್ಟು ಬೆಳವಣಿಗೆ ದಾಖಲಿಸಿದೆ. 

ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಈ ಬೆಳವಣಿಗೆಯು 2023ರ ಫೆಬ್ರುವರಿಯಲ್ಲಿ ಶೇ 6ರಷ್ಟು ದಾಖಲಾಗಿತ್ತು ಎಂದು ಶುಕ್ರವಾರ ಬಿಡುಗಡೆಯಾಗಿರುವ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ವರದಿ ತಿಳಿಸಿದೆ.  

ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ 5.9ರಷ್ಟಿದ್ದ ತಯಾರಿಕಾ ವಲಯದ ಬೆಳವಣಿಗೆಯು ಶೇ 5ಕ್ಕೆ ಕುಗ್ಗಿದೆ. ಆದರೆ, ಗಣಿಗಾರಿಕೆ ಶೇ 8ರಷ್ಟು ಹಾಗೂ ಇಂಧನ ವಲಯದ ಉತ್ಪಾದನೆಯು ಶೇ 7.5ರಷ್ಟು ಏರಿಕೆಯಾಗಿದೆ. ವಿದ್ಯುತ್‌ ವಲಯದ ಉತ್ಪಾದನೆಯು ಶೇ 7.5ರಷ್ಟು ಹೆಚ್ಚಳವಾಗಿದೆ ಎಂದು ವಿವರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.