ADVERTISEMENT

2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಒತ್ತು: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 17:04 IST
Last Updated 27 ಜನವರಿ 2021, 17:04 IST
ಜಗದೀಶ ಶೆಟ್ಟರ್
ಜಗದೀಶ ಶೆಟ್ಟರ್   

ದಾವಣಗೆರೆ: ‘ಬೆಂಗಳೂರು ಕೈಗಾರಿಕೆಗಳಿಂದ ತುಂಬಿ ಹೋಗಿದೆ. ಒಂದೇ ಕಡೆ ಎಲ್ಲ ಉದ್ಯಮಗಳು ಕೇಂದ್ರೀಕೃತಗೊಳ್ಳಬಾರದು. ಎಲ್ಲ ಜಿಲ್ಲೆಗಳೂ ಅಭಿವೃದ್ಧಿ ಹೊಂದುವಂತೆ ಆಗಬೇಕು ಎಂದು ನಿರ್ಧರಿಸಿದ್ದೇವೆ. ಅದಕ್ಕಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲಾಗುವುದು’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಕೈಗಾರಿಕೋದ್ಯಮಿಗಳ ಜತೆಬುಧವಾರ ಸಭೆ ನಡೆಸಿದ ಅವರು, ‘ಬೆಂಗಳೂರು–ಮುಂಬೈ ಹೆದ್ದಾರಿಯನ್ನು ಕೈಗಾರಿಕಾ ಕಾರಿಡಾರ್‌ ಎಂದು ಗುರುತಿಸಲಾಗಿದೆ. ಈ ಹೆದ್ದಾರಿ ಹಾದುಹೋಗುವ ಎಲ್ಲ ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿಯಾಗುತ್ತಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಭೂಮಿ, ನೀರು, ವಿದ್ಯುತ್‌ ಸಹಿತ ಮೂಲ ಸೌಲಭ್ಯಗಳನ್ನು ಒದಗಿಸುತ್ತೇವೆ. ಉದ್ಯಮ ಸ್ಥಾಪಿಸುವವರಿಗೆ ರಿಯಾಯಿತಿ ನೀಡುತ್ತೇವೆ. ಅವರಿಗೆ ಎಲ್ಲ ಪ್ರೋತ್ಸಾಹ ನೀಡುತ್ತೇವೆ’ ಎಂದರು.

‘ವಿಶೇಷ ಹೂಡಿಕೆ ವಲಯ (ಎಸ್‌ಐಆರ್‌) ಎಂದು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳನ್ನು ಗುರುತಿಸಿ ಆದ್ಯತೆ ನೀಡುವ ಯೋಜನೆ ರೂಪಿಸುತ್ತಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.