ನವದೆಹಲಿ: ಜೂನ್ ತಿಂಗಳಲ್ಲಿನ ಚಿಲ್ಲರೆ ಹಣದುಬ್ಬರವು ಶೇ 3.18ರಷ್ಟಾಗಿದ್ದು, ಇದು ಕಳೆದ 6 ತಿಂಗಳಲ್ಲಿನ ಗರಿಷ್ಠ ಮಟ್ಟವಾಗಿದೆ.
ಧಾನ್ಯ, ಬೇಳೆಕಾಳು ಮತ್ತು ಮಾಂಸ, ಮೀನುಗಳ ಬೆಲೆ ದುಬಾರಿಯಾಗಿರುವುದರಿಂದ ಹಣದುಬ್ಬರ ಹೆಚ್ಚಳವಾಗಿದೆ. ಗ್ರಾಹಕರ ಬೆಲೆ ಸೂಚ್ಯಂಕ ಆಧರಿಸಿದ (ಸಿಪಿಐ) ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ಶೇ 3.05ರಷ್ಟಿತ್ತು. ವರ್ಷದ ಹಿಂದಿನ ಇದೇ ಅವಧಿಯಲ್ಲಿ ಶೇ 4.92ಕ್ಕೆ ತಲುಪಿತ್ತು. ಈ ವರ್ಷದ ಜನವರಿಯಿಂದೀಚೆಗೆ ಹಣದುಬ್ಬರವು ಏರುಗತಿಯಲ್ಲಿ ಇದೆ.
ಕೈಗಾರಿಕಾ ಉತ್ಪಾದನೆ ಕುಸಿತ: ಮೇ ತಿಂಗಳ ಕೈಗಾರಿಕಾ ಉತ್ಪಾದನೆಯು ಶೇ 3.1ರಷ್ಟಕ್ಕೆ ಕುಂಠಿತಗೊಂಡಿದೆ. ತಯಾರಿಕಾ ಕ್ಷೇತ್ರದ 23 ವಲಯಗಳ ಪೈಕಿ 11 ವಲಯಗಳ ಪ್ರಗತಿ ಇಳಿಕೆಯಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.