ADVERTISEMENT

ಒಳನಾಡು ಜಲಸಾರಿಗೆ: ಜೆಟ್ಟಿ ನಿರ್ಮಾಣಕ್ಕೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 14:39 IST
Last Updated 24 ಜನವರಿ 2026, 14:39 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರ್ನಾಟಕ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಳನಾಡು ಜಲಸಾರಿಗೆಗೆ ಅಗತ್ಯವಿರುವ ಜೆಟ್ಟಿಗಳನ್ನು ನಿರ್ಮಾಣ ಮಾಡುವ ಯೋಜನೆಗಳಿಗೆ ಒಳನಾಡು ಜಲಸಾರಿಗೆ ಅಭಿವೃದ್ಧಿ ಮಂಡಳಿಯ (ಐಡಬ್ಲ್ಯುಡಿಸಿ) ಸಭೆಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ.

ಈ ಯೋಜನೆಗಳು ಹಡಗು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶ ಹೊಂದಿವೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಮಂಡಳಿಯ ಮೂರನೆಯ ಸಭೆಯು ದೇಶದ ಒಳನಾಡು ಜಲಸಾರಿಗೆ ಜಾಲವನ್ನು ವಿಸ್ತರಿಸುವ ನೀಲನಕ್ಷೆಯೊಂದನ್ನು ಸಿದ್ಧಪಡಿಸಿದೆ. ಮೂಲಸೌಕರ್ಯ ವಲಯದ ಮೇಲಿನ ಪ್ರಮುಖ ಹೂಡಿಕೆ ಪ್ರಸ್ತಾವಗಳಿಗೆ ಒಪ್ಪಿಗೆ ನೀಡಿದೆ, ದೇಶದ ನದಿಗಳ ಆರ್ಥಿಕ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಸಮನ್ವಯವನ್ನು ಬಲಪಡಿಸಲು ನಿರ್ಧರಿಸಿದೆ.

ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ವಾನಂದ ಸೊನೊವಾಲ್‌ ವಹಿಸಿದ್ದರು. ಪರಿಸರ ಪೂರಕ ಸಾರಿಗೆ ವ್ಯವಸ್ಥೆಗೆ ಬಲ ನೀಡುವ, ನದಿಗಳನ್ನು ಆಧರಿಸಿದ ಆರ್ಥಿಕ ಅಭಿವೃದ್ಧಿ ಮಾದರಿಗೆ ಉತ್ತೇಜನ ನೀಡುವ ಹಾಗೂ ಬಹು ಆಯಾಮಗಳ ಸರಕು ಸಾಗಣೆ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ₹1,500 ಕೋಟಿಗೂ ಹೆಚ್ಚಿನ ಮೊತ್ತ ಯೋಜನೆಗಳನ್ನು ಮಂಡಳಿಯು ಗುರುತಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.