ನವದೆಹಲಿ: 2024–25ನೇ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಕೇಂದ್ರ ಸರ್ಕಾರವು ಯಥಾಸ್ಥಿತಿ ಕಾಯ್ದುಕೊಂಡಿದೆ.
ಡಿಸೆಂಬರ್ ತ್ರೈಮಾಸಿಕದಲ್ಲಿದ್ದ ಬಡ್ಡಿದರವು ಮಾರ್ಚ್ ತ್ರೈಮಾಸಿಕಕ್ಕೂ (ಜನವರಿ 1ರಿಂದ ಮಾರ್ಚ್ 31ರ ವರೆಗೆ) ಅನ್ವಯವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಮಂಗಳವಾರ ತಿಳಿಸಿದೆ.
ಪ್ರಸ್ತುತ ಸುಕನ್ಯಾ ಸಮೃದ್ಧಿ ಶೇ 8.2, ಪಿಪಿಎಫ್ ಶೇ 7.1, ಅಂಚೆ ಕಚೇರಿಯ ಉಳಿತಾಯ ಠೇವಣಿ ಶೇ 4, ಕಿಸಾನ್ ವಿಕಾಸ್ ಪತ್ರ ಶೇ 7.5, ಎನ್‌ಎಸ್‌ಸಿ ಶೇ 7.7 ಹಾಗೂ ಮಾಸಿಕ ಉಳಿತಾಯ ಯೋಜನೆಗೆ ಶೇ 7.4ರಷ್ಟು ಬಡ್ಡಿದರ ನಿಗದಿಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.