ADVERTISEMENT

ಸಣ್ಣ ಉಳಿತಾಯ ಯೋಜನೆ ಬಡ್ಡಿ ಬದಲಿಲ್ಲ: ಕೇಂದ್ರ ಸರ್ಕಾರ

ಪಿಟಿಐ
Published 31 ಮಾರ್ಚ್ 2022, 14:38 IST
Last Updated 31 ಮಾರ್ಚ್ 2022, 14:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ರಾಷ್ಟ್ರೀಯ ಉಳಿತಾಯ ಪತ್ರದಂತಹ (ಎನ್‌ಎಸ್‌ಸಿ) ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಏಪ್ರಿಲ್‌–ಜೂನ್ ತ್ರೈಮಾಸಿಕದ ಅವಧಿಗೆ ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿದೆ. ಹಣದುಬ್ಬರ ಪ್ರಮಾಣವು ಹೆಚ್ಚಿನ ಮಟ್ಟದಲ್ಲಿ ಇರುವ ಕಾರಣ ಈ ತೀರ್ಮಾನ ಕೈಗೊಂಡಿದೆ.

2020–21ನೆಯ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ನಂತರದಲ್ಲಿ ಬಡ್ಡಿ ದರವನ್ನು ಬದಲಾಯಿಸಿಲ್ಲ. ಈಗಿನ ತೀರ್ಮಾನದ ಕಾರಣದಿಂದಾಗಿ ಪಿಪಿಎಫ್ ಬಡ್ಡಿ ದರವು ಶೇ 7.1ರ ಮಟ್ಟದಲ್ಲಿ, ಎನ್‌ಎಸ್‌ಸಿ ಬಡ್ಡಿ ದರವು ಶೇ 6.8ರ ಮಟ್ಟದಲ್ಲಿ ಮುಂದುವರಿಯಲಿದೆ.

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಧಿಸೂಚನೆಯಲ್ಲಿ ಪ್ರಕಟಿಸಲಾಗುತ್ತದೆ. ಒಂದು ವರ್ಷದ ಅವಧಿ ಠೇವಣಿಗೆ ಶೇ 5.5ರಷ್ಟು, ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರವು ಶೇ 7.6ರಷ್ಟು ಇರಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.