ನವದೆಹಲಿ: ಮುಂಬೈ ಷೇರುಪೇಟೆಯಲ್ಲಿ (ಬಿಎಸ್‌ಇ) ನಡೆದ ಏಳು ದಿನಗಳ ನಕಾರಾತ್ಮಕ ವಹಿವಾಟಿನ ಪರಿಣಾಮವಾಗಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 10.42 ಲಕ್ಷ ಕೋಟಿಯಷ್ಟು ಕಡಿಮೆ ಆಗಿದೆ. ಇದರಿಂದಾಗಿ ಸೋಮವಾರದ ಅಂತ್ಯಕ್ಕೆ ಷೇರುಪೇಟೆಯ ಒಟ್ಟು ಮೌಲ್ಯವು ₹ 257.88 ಲಕ್ಷ ಕೋಟಿಗೆ ಇಳಿಕೆ ಕಂಡಿದೆ.
ಏಳು ದಿನಗಳ ವಹಿವಾಟು ಅವಧಿಯಲ್ಲಿ ಬಿಎಸ್‌ಇ ಸೆನ್ಸೆಕ್ಸ್ 2,031 ಅಂಶ ಇಳಿಕೆ ಕಂಡಿದೆ.
ಅಭಿವೃದ್ಧಿ ಹೊಂದಿದ ದೇಶಗಳ ಕೇಂದ್ರೀಯ ಬ್ಯಾಂಕ್‌ಗಳು ಇನ್ನೂ ಹೆಚ್ಚಿನ ಬಡ್ಡಿದರ ಏರಿಕೆ, ಜಾಗತಿಕ ಷೇರುಪೇಟೆಗಳ ವಹಿವಾಟು ಇಳಿಮುಖವಾಗಿರುವುದು ಹಾಗೂ ವಿದೇಶಿ ಬಂಡವಾಳ ಹೊರಹರಿವಿನ ಕಾರಣಗಳು ದೇಶದ ಷೇರುಪೇಟೆಗಳಲ್ಲಿ ಹೂಡಿಕೆ ಚಟುವಟಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.