ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ (ಐಒಬಿ) ನಿವ್ವಳ ಲಾಭದಲ್ಲಿ ಶೇ 76ರಷ್ಟು ಏರಿಕೆಯಾಗಿದೆ.
ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹633 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹1,111 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್ ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.
ಒಟ್ಟು ವರಮಾನ ₹8,866 ಕೋಟಿಯಾಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿಎನ್‌ಪಿಎ) ಶೇ 2.89ರಿಂದ ಶೇ 1.97ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.51ರಿಂದ ಶೇ 0.32ಕ್ಕೆ ಕಡಿಮೆಯಾಗಿದೆ. ಬ್ಯಾಂಕ್‌ನ ಸಮರ್ಪಕ ಬಂಡವಾಳ ಅನುಪಾತವು (ಸಿಎಆರ್) ಶೇ 18.28ರಷ್ಟು ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.