ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ (ಐಒಬಿ) ನಿವ್ವಳ ಲಾಭದಲ್ಲಿ ಶೇ 21ರಷ್ಟು ಏರಿಕೆಯಾಗಿದೆ.
2023–24ರ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್ ₹723 ಕೋಟಿ ನಿವ್ವಳ ಲಾಭ ಗಳಿಸಿತ್ತು. ಈ ಬಾರಿ ₹874 ಕೋಟಿಯಷ್ಟಾಗಿದೆ. ವಸೂಲಾಗದ ಸಾಲದ ಪ್ರಮಾಣದಲ್ಲಿ ಇಳಿಕೆಯಿಂದ ಲಾಭದಲ್ಲಿ ಏರಿಕೆಯಾಗಿದೆ ಎಂದು ಬ್ಯಾಂಕ್ ಸೋಮವಾರ ಷೇರುಪೇಟೆಗೆ ತಿಳಿಸಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ ₹7,437 ಕೋಟಿ ವರಮಾನ ಸಂಗ್ರಹವಾಗಿತ್ತು. ಅದು ಈ ಬಾರಿ ₹8,409 ಕೋಟಿಗೆ ಏರಿಕೆಯಾಗಿದೆ. ಕಾರ್ಯಾಚರಣೆ ಲಾಭವು ₹2,266 ಕೋಟಿಯಾಗಿದೆ. ಬಡ್ಡಿ ವರಮಾನವು ₹7,112 ಕೋಟಿಗೆ ತಲುಪಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣ ಶೇ 3.90ಯಿಂದ ಶೇ 2.55ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.62 ರಿಂದ ಶೇ 0.42ಕ್ಕೆ ಕಡಿಮೆಯಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.