ADVERTISEMENT

ಐಒಸಿ: ಚಿತ್ರದುರ್ಗದಲ್ಲಿ ಟರ್ಮಿನಲ್‌ಸ್ಥಾಪನೆಗೆ ₹ 500 ಕೋಟಿ ಹೂಡಿಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 17:37 IST
Last Updated 14 ಫೆಬ್ರುವರಿ 2020, 17:37 IST
ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಉಪಸ್ಥಿತರಿದ್ದರು
ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಉಪಸ್ಥಿತರಿದ್ದರು   

ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಚಿತ್ರದುರ್ಗದಲ್ಲಿ ₹ 500 ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ.

120 ಎಕರೆ ಪ್ರದೇಶದಲ್ಲಿ ಸಾಮಾನ್ಯ ಬಳಕೆ ಸೌಲಭ್ಯದಡಿ (ಸಿಯುಎಫ್) ಪೆಟ್ರೋಲಿಯಂ ಉತ್ಪನ್ನಗಳನ್ನು ಸ್ವೀಕರಿಸುವ, ದಾಸ್ತಾನು ಮಾಡುವ ಮತ್ತು ವಿತರಿಸುವ ಟರ್ಮಿನಲ್ (ಪಿಒಎಲ್) ಸ್ಥಾಪಿಸಲಿದೆ.

ಹುಬ್ಬಳ್ಳಿಯಲ್ಲಿ ನಡೆದ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶದಲ್ಲಿ ‘ಐಒಸಿ’ಯ ಕರ್ನಾಟಕದ ಮುಖ್ಯಸ್ಥ ಡಿ.ಎಲ್. ಪ್ರಮೋದ್ ಮತ್ತು ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.