ADVERTISEMENT

ನವೀಕರಿಸಬಹುದಾದ ಇಂಧನ ಉತ್ಪಾದನೆ: ಏಂಜೆಲ್‌- ಐರಾ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2025, 16:00 IST
Last Updated 16 ಫೆಬ್ರುವರಿ 2025, 16:00 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ನವೀಕರಿಸಬಹುದಾದ ಇಂಧನ ಉತ್ಪಾದನೆ ಹೆಚ್ಚಿಸಲು ಏಂಜೆಲ್‌ ಸಮೂಹದೊಟ್ಟಿಗೆ ಐರಾ ಸಮೂಹವು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಭಾಗವಾಗಿ ಯೋಜನೆಗೆ ಏಂಜೆಲ್‌, ₹86 ಕೋಟಿ (10 ಮಿಲಿಯನ್‌ ಡಾಲರ್‌) ಹೂಡಿಕೆ ಮಾಡಿದೆ.

ಆರಂಭದಲ್ಲಿ ವಾಣಿಜ್ಯ ಬೆಳೆಗಳಾದ ಏಲಕ್ಕಿ, ಕಾಫಿ, ಕಾಳುಮೆಣಸಿನ ವಹಿವಾಟು ನಡೆಸಲಾಗುತ್ತಿತ್ತು. 2023–24ನೇ ಸಾಲಿನಿಂದ ಚಿನ್ನ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆ ಮಾಡಲು ಶುರು ಮಾಡಲಾಯಿತು ಎಂದು ಐರಾ ಸಂಸ್ಥೆ ತಿಳಿಸಿದೆ.

ರಾಜ್ಯದಲ್ಲಿ ವಿದ್ಯುತ್‌ ಕೊರತೆ ಹೆಚ್ಚುತ್ತಿದೆ. ಇದನ್ನು ನಿರ್ವಹಣೆ ಮಾಡಲು ಐರಾ ಸಮೂಹ 50 ಮೆಗಾವಾಟ್‌ ಇಂಧನ ಉತ್ಪಾದನೆಗೆ ಯೋಜನೆ ರೂಪಿಸಿದೆ. ಇದಕ್ಕಾಗಿ ಅಂತರರಾಷ್ಟ್ರೀಯ ಹೂಡಿಕೆ ಕಂಪನಿಯಾದ ಏಂಜೆಲ್‌ ಸಮೂಹದ ಜೊತೆ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದೆ. ಇದು ಮುಂದಿನ ದಿನಗಳಲ್ಲಿ ಹೆಚ್ಚಿನ ಮೊತ್ತದ ಹೂಡಿಕೆಗಳನ್ನು ಆಕರ್ಷಿಸಲಿದ್ದು, ರಾಜ್ಯದಲ್ಲಿ ಉದ್ಯೋಗಗಳನ್ನು ಸೃಷ್ಟಿಗೆ ನೆರವಾಗಲಿವೆ ಎಂದು ತಿಳಿಸಿದೆ.

ADVERTISEMENT

ಕಂಪನಿಯು ವಹಿವಾಟನ್ನು ವಿಸ್ತರಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಐರಾ ಕೇವಲ ವ್ಯಾಪಾರ ಸಂಸ್ಥೆಯಾಗಿಲ್ಲ. ರಾಜ್ಯದ ಆರ್ಥಿಕ ಮತ್ತು ಉದ್ಯೋಗ ಕ್ಷೇತ್ರಕ್ಕೆ ಕೊಡುಗೆ ನೀಡಲು ಬದ್ಧವಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.