
ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕೇತರ ಹಣಕಾಸು ಸಂಸ್ಥೆ ‘ಭಾರತೀಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿ’ (ಐಆರ್‌ಇಡಿಎ) ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ₹24,903 ಕೋಟಿ ಸಾಲ ನೀಡಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಐಆರ್‌ಇಡಿಎ ₹17,236 ಕೋಟಿ ಸಾಲ ನೀಡಿತ್ತು. ಇದಕ್ಕೆ ಹೋಲಿಸಿದರೆ ಸಾಲ ನೀಡಿಕೆ ಪ್ರಮಾಣದಲ್ಲಿ ಶೇ 44ರಷ್ಟು ಹೆಚ್ಚಳವಾಗಿದೆ ಎಂದು ಅದು ಗುರುವಾರ ತಿಳಿಸಿದೆ. ಸಾಲದ ಮಂಜೂರಾತಿಯಲ್ಲಿ ಶೇ 29ರಷ್ಟು ಹೆಚ್ಚಳವಾಗಿದ್ದು, ₹40,100 ಕೋಟಿಯಾಗಿದೆ ಎಂದು ತಿಳಿಸಿದೆ.
‘ಐಆರ್‌ಇಡಿಎ ಸಾಲ ನೀಡಿಕೆ ಪ್ರಮಾಣವು ಡಿಸೆಂಬರ್ ವೇಳೆಗೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ನಿರಂತರವಾಗಿ ಹೆಚ್ಚಳ ಕಂಡಿದೆ. ಇದು ದೇಶದ ಹಸಿರು ಇಂಧನ ಬೆಳವಣಿಗೆಯಲ್ಲಿ ಐಆರ್‌ಇಡಿಎ ವಹಿಸಿರುವ ಪ್ರಮುಖ ಪಾತ್ರವನ್ನು ಪ್ರತಿಬಿಂಬಿಸುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಕುಮಾರ್ ದಾಸ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.