ಏರ್ ಇಂಡಿಯಾ ವಿಮಾನ
ನವದೆಹಲಿ: ಇಸ್ರೇಲ್‌ನ ವಿಮಾನ ನಿಲ್ದಾಣದ ಸಮೀಪ ಕ್ಷಿಪಣಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಮೇ 6ರವರೆಗೂ ಏರ್ ಇಂಡಿಯಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಧಗಿತಗೊಳಿಸಲಾಗಿದೆ.
ಇಸ್ರೇಲ್‌ನ ವಿಮಾನ ನಿಲ್ದಾಣದ ಸಮೀಪ ಕ್ಷಿಪಣಿ ದಾಳಿ ನಡೆದಿರುವುದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
ದೆಹಲಿಯಿಂದ ಟೆಲ್ ಅವಿವ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಬುಧಾಬಿಗೆ ಮಾರ್ಗ ಬದಲಿಸಲಾಗಿದೆ. ಮತ್ತೊಂದೆಡೆ ಟೆಲ್ ಅವಿವ್‌ನಿಂದ ದೆಹಲಿಯತ್ತ ಇಂದು ಪ್ರಯಾಣಿಸಬೇಕಿದ್ದ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಏರ್ ಇಂಡಿಯಾದ ಬೋಯಿಂಗ್ 787 ವಿಮಾನ, ಟೆಲ್ ಅವಿವ್‌ನಲ್ಲಿ ಇಳಿಯಲು ಇನ್ನೇನು ಒಂದು ತಾಸಿಗೂ ಕಡಿಮೆ ಅವಧಿ ಇದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.
ಯೆಮನ್ ಉಡಾಯಿಸಿದ ಕ್ಷಿಪಣಿ ಟೆಲ್ ಅವಿವ್ ವಿಮಾನ ನಿಲ್ದಾಣದ ಸಮೀಪ ಅಪ್ಪಳಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.