ನವದೆಹಲಿ: ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಯ (ಐ.ಟಿ ರಿಟರ್ನ್ಸ್) ಅರ್ಜಿ ನಮೂನೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ನೇರ ತೆರಿಗೆ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಸ್ಪಷ್ಟಪಡಿಸಿದೆ.
ಸಾಫ್ಟವೇರ್ ಮಾತ್ರ ಮೇಲ್ದರ್ಜೆಗೆ ಏರಿಸಲಾಗಿದೆ. ಅರ್ಜಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಮಾಡಿರುವುದರಿಂದ ತೆರಿಗೆದಾರರಿಗೆ ತೊಂದರೆಯಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಯಲ್ಲಿ ಸತ್ಯಾಂಶ ಇಲ್ಲ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.