ADVERTISEMENT

ಸೋನಿ–ಜೀ ವಿಲೀನ ಇನ್ನಷ್ಟು ವಿಳಂಬ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2023, 15:43 IST
Last Updated 29 ಸೆಪ್ಟೆಂಬರ್ 2023, 15:43 IST
ಜೀ ಎಂಟರ್‌ಟೈನ್ಮೆಂಟ್‌ ಎಂಟರ್ಪ್ರೈಸಸ್‌ ಲಿಮಿಟೆಡ್ ಮತ್ತು ಸೋನಿ ಪಿಕ್ಚರ್ಸ್‌ ನೆಟ್‌ವರ್ಕ್ಸ್‌ ಇಂಡಿಯಾ
ಜೀ ಎಂಟರ್‌ಟೈನ್ಮೆಂಟ್‌ ಎಂಟರ್ಪ್ರೈಸಸ್‌ ಲಿಮಿಟೆಡ್ ಮತ್ತು ಸೋನಿ ಪಿಕ್ಚರ್ಸ್‌ ನೆಟ್‌ವರ್ಕ್ಸ್‌ ಇಂಡಿಯಾ   

ಸೋನಿ ಪಿಕ್ಚರ್ಸ್‌ ನೆಟ್‌ವರ್ಕ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಮತ್ತು ಜೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ ಕಂಪನಿಗಳು ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಕೆಲವು ತಿಂಗಳುಗಳು ಹಿಡಿಯಲಿವೆ ಎಂದು ಸೋನಿ ಸಮೂಹವು ಶುಕ್ರವಾರ ತಿಳಿಸಿದೆ.

ಸೆಪ್ಟೆಂಬರ್‌ ವೇಳೇಗೆ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯನ್ನು ಕಂಪನಿಗಳು ಹೊಂದಿದ್ದವು. ಆದರೆ, ಸದ್ಯದ ಸ್ಥಿತಿಯನ್ನು ಗಮನಿಸಿದರೆ ಇನ್ನೂ ಕೆಲವು ತಿಂಗಳುಗಳು ಬೇಕಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಸೋನಿ ಮತ್ತು ಜೀ ಕಂಪನಿಗಳು ಪ್ರತಿಕ್ರಿಯೆ ನೀಡಿಲ್ಲ. ವಿಲೀನದ ನಂತರ ಕಂಪನಿಯ ಒಟ್ಟು ಮೌಲ್ಯವು ₹83 ಸಾವಿರ ಕೋಟಿಯಷ್ಟು ಆಗಲಿದೆ. 2021ರಲ್ಲಿ ವಿಲೀನದ ಘೋಷಣೆ ಮಾಡಲಾಗಿತ್ತು. ಆಗಸ್ಟ್‌ನಲ್ಲಿ ಅದಕ್ಕೆ ಒಪ್ಪಿಗೆ ದೊರೆತಿದೆ. ಜೀ ಸಮೂಹವು ಹಣಕಾಸು ಸಂಸ್ಥೆಗಳಿಗೆ ಸಾಲ ಬಾಕಿ ಉಳಿಸಿಕೊಂಡಿದೆ. ಇದರ ಜೊತೆಗೆ ಹಲವು ಕಾನೂನು ತೊಡಕುಗಳಿಂದಾಗಿ ವಿಲೀನವು ವಿಳಂಬ ಆಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.