ADVERTISEMENT

ಕಚ್ಚಾ ತೈಲ ದರ ಏರಿಕೆ: ವಿಮಾನ ಇಂಧನ ದರ ₹ 3,885ರಷ್ಟು ಹೆಚ್ಚಳ

ಪಿಟಿಐ
Published 1 ಮೇ 2021, 12:30 IST
Last Updated 1 ಮೇ 2021, 12:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿಮಾನ ಇಂಧನ (ಎಟಿಎಫ್‌) ದರವನ್ನು ಶನಿವಾರ ಶೇ 6.7ರಷ್ಟು ಹೆಚ್ಚಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪ್ರತಿ ಕಿಲೋ ಲೀಟರಿಗೆ ₹ 3,885ರಷ್ಟು ಹೆಚ್ಚಾಗಿ ₹ 61,690.28ಕ್ಕೆ ತಲುಪಿದೆ.

ಸ್ಥಳೀಯ ತೆರಿಗೆಯ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ದರದಲ್ಲಿ ವ್ಯತ್ಯಾಸ ಆಗುತ್ತದೆ.

ADVERTISEMENT

ಏಪ್ರಿಲ್‌ ತಿಂಗಳಿನಲ್ಲಿ ಎರಡು ಬಾರಿ ದರದಲ್ಲಿ ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ 1ರಂದು ಶೇ 3ರಷ್ಟು ಮತ್ತು 16ರಂದು ಶೇ 1ರಷ್ಟು ಇಳಿಕೆ ಮಾಡಲಾಗಿತ್ತು.

ಸತತ 16ನೇ ದಿನವೂ ಪೆಟ್ರೋಲ್‌ ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ ಆಗುತ್ತಿರುವುದರಿಂದ ಪೆಟ್ರೋಲ್‌, ಡೀಸೆಲ್‌ ದರದಲ್ಲಿಯೂ ಏರಿಕೆ ಆಗಲಿದೆ ಎಂದು ತೈಲ ಕಂಪನಿಗಳ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.