ಬೆಂಗಳೂರು: ಕೆ. ಸತ್ಯನಾರಾಯಣ ರಾಜು ಅವರನ್ನು ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಸತ್ಯನಾರಾಯಣ ರಾಜು ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದೆ ಈ ಹುದ್ದೆಯಲ್ಲಿದ್ದ ಎಲ್.ವಿ. ಪ್ರಭಾಕರ್ ಅವರ ಅಧಿಕಾರ ಅವಧಿಯು ಡಿಸೆಂಬರ್ 31ಕ್ಕೆ ಕೊನೆಗೊಂಡಿದೆ.
ಸತ್ಯನಾರಾಯಣ ರಾಜು ಅವರು ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಕರ್ತವ್ಯ ನಿಭಾಯಿಸಿದ್ದಾರೆ. ಅವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ 33 ವರ್ಷಗಳ ಅನುಭವ ಇದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.