ADVERTISEMENT

ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಅಜಯ್ ಬಂಗಾ ನೇಮಕ: ಕಮಲಾ ಹ್ಯಾರಿಸ್ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮೇ 2023, 2:35 IST
Last Updated 4 ಮೇ 2023, 2:35 IST
ಅಜಯ್ ಬಂಗಾ (ಎಎಫ್‌ಪಿ ಚಿತ್ರ)
ಅಜಯ್ ಬಂಗಾ (ಎಎಫ್‌ಪಿ ಚಿತ್ರ)   

ವಾಷಿಂಗ್ಟನ್: ಭಾರತ ಮೂಲದ ಅಜಯ್ ಬಂಗಾ ಅವರು ವಿಶ್ವಬ್ಯಾಂಕ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರನ್ನು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಭಿನಂದಿಸಿದ್ದಾರೆ.

ಈ ಬಗ್ಗೆ ಕಮಲಾ ಹ್ಯಾರಿಸ್ ಟ್ವಿಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಬಂಗಾ ಅವರ ಹಿಂದಿನ ಕೆಲಸಗಳನ್ನು ಶ್ಲಾಘಿಸಿರುವ ಕಮಲಾ, ಮುಂದಿನ ದಿನಗಳಲ್ಲಿ ಅವರಿಂದ ನಿರಂತರ ಕೆಲಸವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಅವರು ಜೂನ್‌ 2ರಿಂದ ಐದು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಇರಲಿದ್ದಾರೆ.

ADVERTISEMENT

ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಂಗಾ ಅವರ ಹೆಸರನ್ನು ಸೂಚಿಸುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಫೆಬ್ರುವರಿಯಲ್ಲಿ ಪ್ರಕಟಿಸಿದ್ದರು. ಬಂಗಾ ಅವರಿಗೆ ಭಾರತ ಸರ್ಕಾರವು 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿದೆ.

ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರ ಅಧಿಕಾರಾವಧಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಕೊನೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.