ADVERTISEMENT

ಕರ್ಣಾಟಕ ಬ್ಯಾಂಕ್‌: ಎಂ.ಡಿ, ಸಿಇಒ ಹುದ್ದೆಯಲ್ಲಿ ಭಟ್ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2025, 0:00 IST
Last Updated 16 ನವೆಂಬರ್ 2025, 0:00 IST
   

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಆಗಿ ರಾಘವೇಂದ್ರ ಎಸ್‌. ಭಟ್‌ ಅವರನ್ನು ನವೆಂಬರ್‌ 16ರಿಂದ ಒಂದು ವರ್ಷದ ಅವಧಿಗೆ ಮರು ನೇಮಕ ಮಾಡಲಾಗಿದೆ.

ರಾಘವೇಂದ್ರ ಎಸ್‌. ಭಟ್‌ ಅವರು  ಜುಲೈ 14ರಿಂದ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅವರನ್ನು ಮೊದಲು ಮೂರು ತಿಂಗಳ ಅವಧಿಗೆ ನೇಮಕ ಮಾಡಲಾಗಿತ್ತು. ನಂತರ ಒಂದು ತಿಂಗಳ ಅವಧಿಗೆ ಅವರನ್ನು ಇದೇ ಹುದ್ದೆಗೆ ನೇಮಕ ಮಾಡಲಾಯಿತು. ಈಗ ಅವರ ಸೇವೆಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.