ADVERTISEMENT

ಕರ್ಣಾಟಕ ಬ್ಯಾಂಕ್‌: ₹ 1.26 ಲಕ್ಷ ಕೋಟಿ ವ್ಯವಹಾರ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 21:10 IST
Last Updated 17 ಜುಲೈ 2020, 21:10 IST
ಕರ್ಣಾಟಕ ಬ್ಯಾಂಕಿನ ಆಡಳಿತ ಮಂಡಳಿಯ 96ನೇ ವಾರ್ಷಿಕ ಮಹಾಸಭೆ ಶುಕ್ರವಾರ ನಡೆಯಿತು. ವೆಬೆಕ್ಸ್‌ ಮೂಲಕ ನಡೆದ ಸಭೆಯಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಮಾತನಾಡಿದರು. ಬ್ಯಾಂಕ್‌ ಅಧ್ಯಕ್ಷ ಪಿ. ಜಯರಾಮ್‌ ಭಟ್‌ ಇದ್ದರು.

ಮಂಗಳೂರು: ಜೂನ್‌ 30 ಕ್ಕೆ ಕೊನೆಗೊಂಡ ಪ್ರಥಮ ತ್ರೈಮಾಸಿಕದಲ್ಲಿ ಕರ್ಣಾಟಕ ಬ್ಯಾಂಕಿನ ಒಟ್ಟು ವ್ಯವಹಾರವು ₹ 1.26 ಲಕ್ಷ ಕೋಟಿಗೆ ತಲುಪಿದೆ. ವಾರ್ಷಿಕ ಶೇಕಡ 3.89ರಷ್ಟು ಬೆಳವಣಿಗೆ ಸಾಧಿಸಿದೆ.

ಬ್ಯಾಂಕಿನ ಠೇವಣಿಗಳ ಮೊತ್ತವು ₹ 68,520.72 ಕೋಟಿಯಿಂದ ₹ 71,853.98 ಕೋಟಿಗೆ ಏರಿದ್ದು, ಮುಂಗಡಗಳು ₹ 52,818.80 ಕೋಟಿಯಿಂದ ₹ 54,209.50 ಕೋಟಿಗೆ ತಲುಪಿದೆ.

ಕರ್ಣಾಟಕ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದ ಅಂತ್ಯಕ್ಕೆ ಶೇ 11.95ರಷ್ಟು ವಹಿವಾಟು ಪ್ರಗತಿ ಸಾಧಿಸಿದ್ದು, ಸಾರ್ವಕಾಲಿಕ ದಾಖಲೆಯ ₹ 196.38 ಕೋಟಿ ನಿವ್ವಳ ಲಾಭ ಘೋಷಿಸಿದೆ.

ADVERTISEMENT

ಬ್ಯಾಂಕ್ ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 175.42 ಕೋಟಿ ಲಾಭ ದಾಖಲಿಸಿತ್ತು. ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವೆಬೆಕ್ಸ್ ಮೂಲಕ ಶುಕ್ರವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮೊದಲ ತ್ರೈಮಾಸಿಕದ ಹಣಕಾಸು ವರದಿ ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.