ADVERTISEMENT

ಶಿಯೊಮಿ ಕಂಪನಿಯ ₹ 5,551 ಕೋಟಿ ಮೊತ್ತ ಜಪ್ತಿಗೆ ತಡೆ: ಇಡಿಗೆ ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 7 ಮೇ 2022, 2:28 IST
Last Updated 7 ಮೇ 2022, 2:28 IST
   

ಬೆಂಗಳೂರು:ಶಿಯೊಮಿ ಇಂಡಿಯಾ ಕಂಪನಿಗೆ ಸೇರಿದ ನಾಲ್ಕು ಬ್ಯಾಂಕ್‌ ಖಾತೆಗಳಲ್ಲಿ ₹ 5,551.27 ಕೋಟಿಯ ಬೃಹತ್‌ ಮೊತ್ತದ ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಬೆಂಗಳೂರಿನ ಮಾರತಹಳ್ಳಿಯ ಟೆಕ್‌ ಗ್ರಾಮದಲ್ಲಿರುವ ಶಿಯೊಮಿ ಕಂಪನಿ ಕಚೇರಿಯ ಅಧಿಕೃತ ಪ್ರತಿನಿಧಿ ಸಮೀರ್‌ ಬಿ.ಎಸ್‌.ರಾವ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ (ಮೇ 5) ವಿಚಾರಣೆ ನಡೆಸಿ, ಪ್ರತಿವಾದಿಗಳಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

‘ಸದ್ಯದ ಮಟ್ಟಿಗೆ ಜಪ್ತಿಗೆ ಆದೇಶಿಸಲಾಗಿರುವ ಬ್ಯಾಂಕ್‌ ಖಾತೆಗಳಲ್ಲಿರುವ ಹಣವನ್ನುಕಂಪನಿಯು ತನ್ನದೈನಂದಿನ ಖರ್ಚು ವೆಚ್ಚಗಳಿಗಾಗಿ ಬಳಸಬಹುದು’ ಎಂದು ನ್ಯಾಯಪೀಠ ಮಧ್ಯಂತರ ಆದೇಶದಲ್ಲಿ ವಿವರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.