ADVERTISEMENT

ರಾಜ್ಯಕ್ಕೆ ಅನ್ಯಾಯ: ನಿರ್ಮಲಾಗೆ ಮನವರಿಕೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 21:29 IST
Last Updated 12 ಮಾರ್ಚ್ 2020, 21:29 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್    

ಬೆಂಗಳೂರು: ಕೇಂದ್ರವು ಅನುದಾನ ನೀಡುವಾಗ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸಿ ಎಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರ ನಿಯೋಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದೆ.

ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದ ನಿಯೋಗ ದೆಹಲಿಯಲ್ಲಿ ಗುರುವಾರ ನಿರ್ಮಲಾ ಅವರನ್ನು ಭೇಟಿ ಮಾಡಿತು.

‘ನೇರ ಮತ್ತು ಪರೋಕ್ಷ ತೆರಿಗೆ ಮೂಲಕ ಕರ್ನಾಟಕವು ₹1.61 ಲಕ್ಷ ಕೋಟಿ (2018ರ ಲೆಕ್ಕ) ಕೇಂದ್ರಕ್ಕೆ ನೀಡುತ್ತಿದೆ. ಆದರೆ, ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿರುವುದರ ಜತೆಗೆ ಕೇಂದ್ರದ ತೆರಿಗೆ ಪಾಲಿನಲ್ಲಿ ಎರಡು ವರ್ಷದ ಅಂದಾಜಿನಲ್ಲಿ ₹20 ಸಾವಿರ ಕೋಟಿ ಕಡಿತವಾಗಲಿದೆ’ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ADVERTISEMENT

ಅನ್ಯಾಯವನ್ನು ಸರಿಪಡಿಸಿ ಎಂಬ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸದಾನಂದಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.