ADVERTISEMENT

ಪ್ರತಿ ಕ್ವಿಂಟಲ್‌ ತೊಗರಿಗೆ ₹450 ಪ್ರೋತ್ಸಾಹಧನ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2025, 13:42 IST
Last Updated 8 ಫೆಬ್ರುವರಿ 2025, 13:42 IST
   

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್‌ ತೊಗರಿಗೆ ರಾಜ್ಯ ಸರ್ಕಾರ ₹450 ಪ್ರೋತ್ಸಾಹಧನ ಘೋಷಿಸಿದೆ.

2024–25ನೇ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ ತೊಗರಿಗೆ ಕೇಂದ್ರ ಸರ್ಕಾರವು ₹7,550 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದೆ. ರಾಜ್ಯ ಸರ್ಕಾರವು ಘೋಷಿಸಿರುವ ಪ್ರೋತ್ಸಾಹಧನವೂ ಸೇರಿ ತೊಗರಿ ಬೆಳೆಗಾರರಿಗೆ ₹ 8,000 ದೊರೆಯಲಿದೆ.

ಪ್ರೋತ್ಸಾಹಧನಕ್ಕೆ ಅವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಿಂದ ಬಳಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.