ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 165 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 115 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 43.5ರಷ್ಟು ಹೆಚ್ಚಾಗಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
ನಿವ್ವಳ ಬಡ್ಡಿ ಆದಾಯವು ₹ 601 ಕೋಟಿಗಳಿಂದ ₹ 680 ಕೋಟಿಗಳಿಗೆ, ಅಂದರೆ ಶೇ 13.1ರಷ್ಟು, ಹೆಚ್ಚಾಗಿದೆ ಎಂದು ಅದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.