ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಿಂದ ಪಿಎಂ ಕೇರ್ಸ್ ನಿಧಿಗೆ ₹ 3.14 ಕೋಟಿ ನೀಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಮೊತ್ತದ ಡಿ.ಡಿ.ಯನ್ನು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಬಿ. ರಮೇಶ್ ಬಾಬು ಹಸ್ತಾಂತರ ಮಾಡಿದರು ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.
‘ಬ್ಯಾಂಕ್ ತನ್ನ ಸಿಎಸ್ಆರ್ ಚಟುವಟಿಕೆಗಳ ಮೂಲಕ ಸಮಾಜಕ್ಕೆ ದೊಡ್ಡ ರೀತಿಯಲ್ಲಿ ನೆರವು ನೀಡಲು ಬದ್ಧವಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.