ಬೆಂಗಳೂರು: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕರೂರು ವೈಶ್ಯ ಬ್ಯಾಂಕ್ ₹513 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹456 ಕೋಟಿ ಲಾಭ ಗಳಿಸಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 13ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರತಿ ಈಕ್ವಿಟಿ ಷೇರಿಗೆ ₹2.60 (ಶೇ 130ರಷ್ಟು) ಲಾಭಾಂಶ ನೀಡಲು ಬ್ಯಾಂಕ್‌ನ ಆಡಳಿತ ಮಂಡಳಿಯು ಶಿಫಾರಸು ಮಾಡಿದೆ.
ಮಾರ್ಚ್ ತ್ರೈಮಾಸಿಕದಲ್ಲಿ ಒಟ್ಟು ವರಮಾನ ₹3,025 ಕೋಟಿಯಾಗಿದೆ. 2024–25ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹1,942 ಕೋಟಿ ಲಾಭ ಗಳಿಸಿದೆ. ಒಟ್ಟಾರೆ ಶೇ 21ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.
‘ಬೆಳವಣಿಗೆ, ಲಾಭಾಂಶ ಮತ್ತು ಆಸ್ತಿಯ ಗುಣಮಟ್ಟದಲ್ಲಿ ಬ್ಯಾಂಕ್ ಉತ್ತಮ ಕಾರ್ಯಕ್ಷಮತೆ ಸಾಧಿಸಿದೆ. ಸಾಲ ಮತ್ತು ಠೇವಣಿಯು ಶೇ 14ರಷ್ಟು ಏರಿಕೆ ಕಂಡಿದೆ. ಚಿಲ್ಲರೆ, ಕೃಷಿ ಮತ್ತು ಎಂಎಸ್‌ಎಂಇ ವಲಯದಲ್ಲಿ ಸಾಲ ನೀಡಿಕೆಯಲ್ಲಿ ಶೇ 20ರಷ್ಟು ಬೆಳವಣಿಗೆ ಸಾಧಿಸಿದ್ದೇವೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರಮೇಶ್ ಬಾಬು ಬಿ. ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.