ADVERTISEMENT

ಕೇರಳದಿಂದಲೂ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ

​ಪ್ರಜಾವಾಣಿ ವಾರ್ತೆ
Published 22 ಮೇ 2022, 1:49 IST
Last Updated 22 ಮೇ 2022, 1:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕೊಚ್ಚಿ: ಕೇರಳ ಸರ್ಕಾರ ಶನಿವಾರ ಪೆಟ್ರೋಲ್‌ ಮೇಲಿನ ರಾಜ್ಯ ತೆರಿಗೆಯನ್ನು ಲೀಟರಿಗೆ ₹2.41 ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಲೀಟರಿಗೆ ₹1.36 ಇಳಿಕೆ ಮಾಡಿದೆ.

‘ಕೇಂದ್ರ ಸರ್ಕಾರ ಇಂಧನದ ಮೇಲೆ ಭಾರಿ ತೆರಿಗೆ ವಿಧಿಸುತ್ತದೆ. ಈಗ ಭಾಗಶಃ ಕಡಿತ ಮಾಡಿದೆ. ಆದರೂ, ಕೇಂದ್ರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಕೇರಳ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಹೇಳಿದ್ದಾರೆ.

ಇದಕ್ಕೂ ಮೊದಲು ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ₹8 ಮತ್ತು ₹6 ಕಡಿತ ಮಾಡಿತ್ತು.

ADVERTISEMENT

‘ಎಕ್ಸೈಸ್‌ ಸುಂಕ ಕಡಿತದಿಂದಾಗಿ ಪೆಟ್ರೋಲ್‌ ಮಾರಾಟ ದರವು ಲೀಟರಿಗೆ ₹9.5 ಮತ್ತು ಡೀಸೆಲ್‌ ದರವು ಲೀಟರಿಗೆ ₹7ರಷ್ಟು ಕಡಿಮೆ ಆಗಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ತಿಳಿಸಿದ್ದರು.

ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.