ನವದೆಹಲಿ: ಕಚ್ಚಾ ತೈಲ, ನೈಸರ್ಗಿಕ ಅನಿಲ ಸೇರಿ ಪ್ರಮುಖ ಎಂಟು ಮೂಲಸೌಕರ್ಯ ವಲಯದ ಉತ್ಪಾದನೆಯು ನವೆಂಬರ್‌ನಲ್ಲಿ ಇಳಿಕೆಯಾಗಿದೆ.
ಕಳೆದ ವರ್ಷದ ನವೆಂಬರ್‌ನಲ್ಲಿ ಶೇ 7.9ರಷ್ಟು ಪ್ರಗತಿ ದಾಖಲಾಗಿತ್ತು. ಈ ಬಾರಿ ಶೇ 4.3ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
ಅಕ್ಟೋಬರ್ ತಿಂಗಳಲ್ಲಿ ಶೇ 3.7ರಷ್ಟು ಪ್ರಗತಿಯಾಗಿತ್ತು.
ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನ, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಎಂಟು ವಲಯಗಳಾಗಿವೆ.
ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್–ನವೆಂಬರ್ ಅವಧಿಯಲ್ಲಿ ಈ ವಲಯಗಳ ಬೆಳವಣಿಗೆಯು ಶೇ 4.2ರಷ್ಟಿದೆ. 2023–24ರ ಇದೇ ಅವಧಿಯಲ್ಲಿ ಶೇ 8.7ರಷ್ಟಿತ್ತು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.