ನವದೆಹಲಿ: ದೇಶದ ಪ್ರಮುಖ ಎಂಟು ಮೂಲಸೌಕರ್ಯ ವಲಯಗಳ ಬೆಳವಣಿಗೆಯು ಏಪ್ರಿಲ್ ತಿಂಗಳಲ್ಲಿ ಎಂಟು ತಿಂಗಳ ಕನಿಷ್ಠ ಮಟ್ಟವಾದ ಶೇ 0.5ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
ಕಚ್ಚಾ ತೈಲ, ಸಂಸ್ಕರಿಸಿದ ಉತ್ಪನ್ನಗಳು ಮತ್ತು ರಸಗೊಬ್ಬರದ ಉತ್ಪಾದನೆಯಲ್ಲಿ ಇಳಿಕೆಯಾಗಿದೆ. ಹೀಗಾಗಿ, ಪ್ರಗತಿ ಕುಂಠಿತವಾಗಿದೆ ಎಂದು ಹೇಳಿದೆ.
ಮಾರ್ಚ್‌ನಲ್ಲಿ ಈ ವಲಯದ ಉತ್ಪಾದನೆಯು ಶೇ 4.6ರಷ್ಟಿತ್ತು. ಕಳೆದ ವರ್ಷದ ಏಪ್ರಿಲ್‌ನಲ್ಲಿ ಶೇ 6.9ರಷ್ಟಿತ್ತು ಎಂದು ತಿಳಿಸಿದೆ.
ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನ, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಎಂಟು ವಲಯಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.