ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಅಧ್ಯಕ್ಷರನ್ನಾಗಿ ನಿವೃತ್ತ ಡಿಜಿಪಿ ಎಚ್.ಸಿ.ಕಿಶೋರ್‌ಚಂದ್ರ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಗುರುವಾರ ಆದೇಶ ಹೊರಡಿಸಲಾಗಿದೆ, ಹಾಲಿ ಅಧ್ಯಕ್ಷ ಎಂ.ಆರ್.ಕಾಂಬ್ಳೆ ಅವರ ಅಧಿಕಾರ ಅವಧಿ ಇದೇ ತಿಂಗಳ 31 ಕ್ಕೆ ಕೊನೆಗೊಳ್ಳಲಿದೆ. ನಿವೃತ್ತ ಡಿಜಿಪಿ ನೀಲಮಣಿ ರಾಜು ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ರೇರಾ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಧ್ಯೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಟಿ.ಎಂ.ವಿಜಯಭಾಸ್ಕರ್ ಮುಂತಾದವರ ಹೆಸರೂ ಈ ಹುದ್ದೆಗೆ ಕೇಳಿ ಬಂದಿತ್ತು. ಕಿಶೋರ್‌ಚಂದ್ರ ಅವರು ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿರುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.