ಮುಂಬೈ: 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್ ₹4,701 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹4,265 ಕೋಟಿ ಲಾಭ ಗಳಿಸಲಾಗಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 10ರಷ್ಟು ಹೆಚ್ಚಳವಾಗಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,044 ಕೋಟಿ ಲಾಭ ಗಳಿಸಲಾಗಿತ್ತು ಎಂದು ಬ್ಯಾಂಕ್ ತಿಳಿಸಿದೆ.
ಡಿಸೆಂಬರ್ ತ್ರೈಮಾಸಿಕದ ವರಮಾನದಲ್ಲೂ ಏರಿಕೆಯಾಗಿದ್ದು, ಒಟ್ಟು ₹16,050 ಕೋಟಿ ಗಳಿಸಿದೆ. ವಸೂಲಾಗದ ಸರಾಸರಿ ಸಾಲದ ಪ್ರಮಾಣವು (ಜಿಎನ್‌ಪಿಎ) ಶೇ 1.49ರಿಂದ ಶೇ 1.50ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.