
ಪಿಟಿಐ
ನವದೆಹಲಿ: ಕಾರ್ಮಿಕರು, ಅಣುಶಕ್ತಿ ವಲಯ ಮತ್ತು ಗ್ರಾಮೀಣ ಉದ್ಯೋಗ ಖಾತರಿಗೆ ಸಂಬಂಧಿಸಿದ ಕಾನೂನುಗಳನ್ನು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಫೆಬ್ರುವರಿಯಲ್ಲಿ ರಾಷ್ಟ್ರದಾದ್ಯಂತ ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ.
ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ಕೇಂದ್ರ ಸರ್ಕಾರವು ಜನರ ಹಕ್ಕುಗಳ ಮೇಲೆ ನಡೆಸುತ್ತಿರುವ ಆಕ್ರಮಣವನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಫೆಬ್ರುವರಿ 12ರಂದು ಸಾಮೂಹಿಕ ಮುಷ್ಕರಕ್ಕೆ ಕರೆ ನೀಡಲು ತೀರ್ಮಾನಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.