ಮನ್ಸುಖ್ ಮಾಂಡವೀಯ
ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ ಮತ್ತು ಖಾಸಗಿ ವಲಯದ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ ₹7,500 ಪಿಂಚಣಿ ಹೆಚ್ಚಿಸುವ ಬಗ್ಗೆ ಸರ್ಕಾರವು ತ್ವರಿತವಾಗಿ ಕ್ರಮಕೈಗೊಳ್ಳಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರು, ಇಪಿಎಸ್–95 ರಾಷ್ಟ್ರೀಯ ಆಂದೋಲನ ಸಮಿತಿಗೆ (ಎನ್‌ಎಸಿ) ಭರವಸೆ ನೀಡಿದ್ದಾರೆ.
ಪಿಂಚಣಿ ಮೊತ್ತ ಹೆಚ್ಚಳ ಸಂಬಂಧ ಸಮಿತಿಯ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸರ್ಕಾರದ ಕ್ರಮದಿಂದ 78 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂಬ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಬೇಡಿಕೆ ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಸಮಿತಿಯು ತಿಳಿಸಿದೆ.
‘ಹಲವು ವರ್ಷಗಳಿಂದ ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯ ಮತ್ತು ಕಾರ್ಮಿಕ ಸಚಿವಾಲಯವು ಬೇಡಿಕೆ ಈಡೇರಿಸುವ ಬಗ್ಗೆ ಭರವಸೆ ನೀಡಿವೆ’ ಎಂದು ಸಮಿತಿಯ ಅಧ್ಯಕ್ಷ ಅಶೋಕ್ ರಾವುತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.