ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಪಾಲಿಸಿಗಳು ಇನ್ನು ಮುಂದೆ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಶಾಖೆಗಳಲ್ಲಿ ಕೂಡ ಲಭ್ಯವಾಗಲಿದೆ.
ಇದು ವಿಮಾ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶಗಳಿಗೆ ಮತ್ತಷ್ಟು ವಿಸ್ತರಿಸಲು ಹಾಗೂ ಆರ್ಥಿಕ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಗ್ರಾಮೀಣ ಪ್ರದೇಶಗಳಲ್ಲಿ ಬಲಿಷ್ಠವಾಗಿದೆ. ಈ ಪಾಲುದಾರಿಕೆ ಮೂಲಕ ಆ್ಯನ್ಯುಟಿ, ಯುಲಿಪ್, ಅವಧಿ ವಿಮೆ ಸೇರಿ ಎಲ್‌ಐಸಿಯ ಹಲವು ಪಾಲಿಸಿಗಳನ್ನು ಎಲ್ಲಾ ಶಾಖೆಗಳ ಮೂಲಕ ನೀಡಲಾಗುತ್ತದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.