ADVERTISEMENT

ಹಾವೇರಿಯಿಂದ ದೆಹಲಿ, ಗೋವಾ ರಾಜ್ಯಕ್ಕೆ ಶುಂಠಿ ರಫ್ತು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 19:30 IST
Last Updated 3 ಏಪ್ರಿಲ್ 2020, 19:30 IST
ರಾಣೆಬೆನ್ನೂರು ಮಾರುಕಟ್ಟೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ರಾಣೆಬೆನ್ನೂರು ಮಾರುಕಟ್ಟೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಹಾವೇರಿ: ರಾಣೆಬೆನ್ನೂರು ಮಾರುಕಟ್ಟೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವರ್ತಕರೊಂದಿಗೆ ಮಾತನಾಡಿ, ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಿದರು.

ಶುಕ್ರವಾರ ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಕಡ್ಡಾಯವಾಗಿ ಪ್ರತಿ ಮಾರಾಟ ಸ್ಥಳದಲ್ಲಿ ಅಂತರವನ್ನು ಕಾಪಾಡಿಕೊಳ್ಳಬೇಕು. ಸಾಮಾಜಿಕ ಅಂತರದೊಂದಿಗೆ ತರಕಾರಿ ಖರೀದಿಗೆ ಜನರಿಗೆ ಮಾರ್ಗದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ.ದಿಲೀಪ್‌ ಶಶಿ, ತಹಶೀಲ್ದಾರ್‌ ಬಸವನಗೌಡ, ಪೌರಾಯುಕ್ತ ಡಾ.ಮಹಾಂತೇಶ ಉಪಸ್ಥಿತರಿದ್ದರು.

ADVERTISEMENT

ಹೊರ ಜಿಲ್ಲೆಗೆ ರೈತರ ಉತ್ಪನ್ನ:ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಜಿಲ್ಲೆಯ ರೈತರ ತೋಟಗಾರಿಕಾ ಉತ್ಪನ್ನಗಳನ್ನು ದೆಹಲಿ, ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ರಫ್ತು ಮಾಡಲಾಗಿದೆ.

ಜಿಲ್ಲೆಯ ರೈತರು ಬೆಳೆದ ಶುಂಠಿಯನ್ನು ದೆಹಲಿಗೆ 16 ಮೆಟ್ರಿಕ್ ಟನ್, ಶಿವಮೊಗ್ಗಕ್ಕೆ ನಾಲ್ಕುಮೆಟ್ರಿಕ್ ಟನ್, ಹುನಗುಂದಕ್ಕೆ ಎರಡುಮೆಟ್ರಿಕ್ ಟನ್ ಶುಂಠಿಯನ್ನು ಕಳುಹಿಸಲಾಗಿದೆ. ಗೋವಾ ರಾಜ್ಯಕ್ಕೆ ಐದು ಮೆಟ್ರಿಕ್ ಟನ್ ಕಲ್ಲಂಗಡಿ ಹಣ್ಣನ್ನು ಕಳುಹಿಸಲಾಗಿದೆ. ದಾವಣಗೆರೆ ಹಾಗೂ ಚಿತ್ರದುರ್ಗಕ್ಕೆ ಒಂದು ಮೆಟ್ರಿಕ್ ಟನ್ ಪೇರಲ ಹಣ್ಣನ್ನು ಕಳುಹಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.