ADVERTISEMENT

ಬಾಹ್ಯಾಕಾಶ: ಎಫ್‌ಡಿಐ ನಿಯಮ ಸಡಿಲಿಕೆಗೆ ಕೇಂದ್ರದ ಚಿಂತನೆ

ಪಿಟಿಐ
Published 11 ಸೆಪ್ಟೆಂಬರ್ 2023, 14:10 IST
Last Updated 11 ಸೆಪ್ಟೆಂಬರ್ 2023, 14:10 IST
ಎಫ್‌ಡಿಐ
ಎಫ್‌ಡಿಐ   

ನವದೆಹಲಿ : ಬಾಹ್ಯಾಕಾಶ ವಲಯದಲ್ಲಿ ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ಉದ್ದೇಶದಿಂದ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ನಿಯಮ ಸಡಿಲಿಸುವ ಆಲೋಚನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿಪಿಐಐಟಿ) ಕಾರ್ಯದರ್ಶಿ ರಾಜೇಶ್‌ ಕುಮಾರ್ ಸಿಂಗ್‌ ಹೇಳಿದ್ದಾರೆ.

ಭಾರತದಲ್ಲಿ ಹೂಡಿಕೆ ಮಾಡಲು ಸೌದಿ ಅರೇಬಿಯಾದ ಕಂಪನಿಗಳಿಗೆ ಹೆಚ್ಚಿನ ಅವಕಾಶ ಇದೆ. ವಿಮಾನಯಾನ, ಔಷಧ, ನವೀಕರಿಸಬಲ್ಲ ಇಂಧನ, ಆಹಾರ ಸಂಸ್ಕರಣೆ ಮತ್ತು ಕೃಷಿ ಸಂಬಂಧಿತ ತಂತ್ರಜ್ಞಾನ ವಲಯಗಳಲ್ಲಿ ಹೂಡಿಕೆಗೆ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಎರಡೂ ದೇಶಗಳ ಮಧ್ಯೆ 2022–23ರಲ್ಲಿ ₹4.38 ಲಕ್ಷ ಕೋಟಿ ಮೌಲ್ಯದ ದ್ವಿಪಕ್ಷೀಯ ವಹಿವಾಟು ನಡೆದಿದೆ. 2021–22ರಲ್ಲಿ ₹73,040 ಕೋಟಿ ಮೌಲ್ಯದ ದ್ವಿಪಕ್ಷೀಯ ವಹಿವಾಟು ನಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.