ADVERTISEMENT

ಎಲ್‌ಪಿಜಿ ಸಿಲಿಂಡರ್‌ ದರ ₹ 1002

ಪಿಟಿಐ
Published 7 ಮೇ 2022, 18:39 IST
Last Updated 7 ಮೇ 2022, 18:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ₹ 50 ಹೆಚ್ಚಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಶನಿವಾರ 14.2 ಕೆ.ಜಿ ತೂಕದ ಸಿಲಿಂಡರ್‌ ದರ ₹ 1002.50ಕ್ಕೆ ಏರಿಕೆ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸಿಲಿಂಡರ್‌ ದರದಲ್ಲಿ ಏರಿಕೆ ಮಾಡಿವೆ.

ಸಬ್ಸಿಡಿ ಇಲ್ಲದೇ ಇರುವುದರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಪಾವತಿಸಬೇಕಿರುವ ಇದುವರೆಗಿನ ಗರಿಷ್ಠ ದರ ಇದಾಗಿದೆ. ಆರು ವಾರಗಳಲ್ಲಿ ಎರಡನೇ ಬಾರಿಗೆ ಎಲ್‌ಪಿಜಿ ದರದಲ್ಲಿ ಏರಿಕೆ ಮಾಡಲಾಗಿದೆ. ಮಾರ್ಚ್‌ 22ರಂದು ₹ 50ರಷ್ಟು ಹೆಚ್ಚಳ ಮಾಡಲಾಗಿತ್ತು. 2021ರ ಏಪ್ರಿಲ್‌ನಿಂದ ಈವರೆಗೆ ಪ್ರತಿ ಸಿಲಿಂಡರ್‌ ದರ ₹ 190ರಷ್ಟು ಹೆಚ್ಚಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.