ADVERTISEMENT

ಡಿಸೆಂಬರ್‌ ತ್ರೈಮಾಸಿಕ: ಮಹೀಂದ್ರ ಲಾಭ ಎರಡು ಪಟ್ಟು ಹೆಚ್ಚಳ

ಪಿಟಿಐ
Published 10 ಫೆಬ್ರುವರಿ 2022, 10:45 IST
Last Updated 10 ಫೆಬ್ರುವರಿ 2022, 10:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 1,353 ಕೋಟಿ ಆಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿ ₹ 531 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಎರಡು ಪಟ್ಟು ಹೆಚ್ಚಳವಾಗಿದೆ.

ವರಮಾನವು ₹ 14,057 ಕೋಟಿ ಇದ್ದಿದ್ದು, ₹ 15,239 ಕೋಟಿಗೆ (ಶೇಕಡ 8ರಷ್ಟು) ಏರಿಕೆ ಆಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ADVERTISEMENT

ಡಿಸೆಂಬರ್‌ ತ್ರೈಮಾಸಿಕದಲ್ಲಿ 1.18 ಲಕ್ಷ ವಾಹನಗಳನ್ನು ಮಾರಾಟ ಮಾಡಲಾಗಿದ್ದು, ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಮಾರಾಟದಲ್ಲಿ ಶೇ 2ರಷ್ಟು ಇಳಿಕೆ ಕಂಡುಬಂದಿದೆ. ಟ್ರ್ಯಾಕ್ಟರ್‌ ಮಾರಾಟ ಶೇ 9ರಷ್ಟು ಕಡಿಮೆ ಆಗಿದೆ ಎಂದು ಅದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.