ADVERTISEMENT

ಮಹೀಂದ್ರ ಲಾಭ ₹ 1,192 ಕೋಟಿಗೆ ಏರಿಕೆ

ಪಿಟಿಐ
Published 28 ಮೇ 2022, 10:04 IST
Last Updated 28 ಮೇ 2022, 10:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯು 2022ರ ಮಾರ್ಚ್‌ ತ್ರೈಮಾಸಿಕದಲ್ಲಿ ₹ 1,192 ಕೋಟಿ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ₹ 245 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಐದು ಪಟ್ಟು ಹೆಚ್ಚಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಕಂಪನಿಯ ವರಮಾನ ಶೇ 28ರಷ್ಟು ಹೆಚ್ಚಾಗಿದ್ದು ₹ 17,124 ಕೋಟಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹ 13,356 ಕೋಟಿ ವರಮಾನ ಗಳಿಸಿತ್ತು. 2021–22ನೇ ಹಣಕಾಸು ವರ್ಷದಲ್ಲಿ ಕಂಪನಿಯ ಲಾಭವು ₹ 984 ಕೋಟಿಯಿಂದ ₹ 4,935 ಕೋಟಿಗೆ ಏರಿಕೆ ಆಗಿದೆ.

ADVERTISEMENT

‘ಕೋವಿಡ್‌, ಸರಕುಗಳ ದರ ಏರಿಕೆ, ಸೆಮಿಕಂಡಕ್ಟರ್‌ ಚಿಪ್‌ ಕೊರತೆ ಮತ್ತು ಉಕ್ರೇನ್‌ ಬಿಕ್ಕಟ್ಟಿನಂತಹ ಹಲವು ಸವಾಲುಗಳ ನಡುವೆಯೂ ಉತ್ತಮ ಫಲಿತಾಂಶ ಸಾಧ್ಯವಾಗಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅನಿಶ್‌ ಶಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.