ಮುಂಬೈ: 2024–25ರ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ವಾಹನ ತಯಾರಿಕ ಕಂಪನಿ ಮಹೀಂದ್ರ ಆ್ಯಂಡ್ ಮಹೀಂದ್ರ, ₹3,181 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.
ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹2,658 ಕೋಟಿ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 20ರಷ್ಟು ಏರಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ.
ವರಮಾನದಲ್ಲಿ ಶೇ 17ರಷ್ಟು ಹೆಚ್ಚಳವಾಗಿದ್ದು, ₹41,470 ಕೋಟಿ ಗಳಿಸಿದೆ. ಪ್ರಯಾಣಿಕ ವಾಹನಗಳ ಮಾರಾಟವು 2.45 ಲಕ್ಷವಾಗಿದೆ. 1.42 ಲಕ್ಷ ಯುಟಿಲಿಟಿ ವಾಹನಗಳು ಮಾರಾಟವಾಗಿವೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.