
ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ₹4,083 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹3,283 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭವು ಶೇ 24ರಷ್ಟು ಏರಿಕೆ ಕಂಡಿದೆ. ವಾಹನಗಳ ಮಾರಾಟ ಮತ್ತು ವ್ಯವಹಾರದಲ್ಲಿನ ಏರಿಕೆಯಿಂದ ಲಾಭದ ಪ್ರಮಾಣ ಹೆಚ್ಚಳವಾಗಿದೆ ಎಂದು ಕಂಪನಿ ಬುಧವಾರ ಷೇರುಪೇಟೆಗೆ ತಿಳಿಸಿದೆ.
ಒಟ್ಟು ವರಮಾನವು ₹45,529 ಕೋಟಿಯಾಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹37,218 ಕೋಟಿ ವರಮಾನ ಇತ್ತು. ಜೂನ್ ತ್ರೈಮಾಸಿಕದಲ್ಲಿ 2,47,249 ವಾಹನಗಳು ಮಾರಾಟವಾಗಿದ್ದು, ಶೇ 17ರಷ್ಟು ಏರಿಕೆ ಕಂಡಿದೆ. ಟ್ರ್ಯಾಕ್ಟರ್‌ಗಳ ಮಾರಾಟದಲ್ಲಿ ಶೇ 10ರಷ್ಟು ಹೆಚ್ಚಳವಾಗಿದ್ದು, 1,32,964 ಟ್ರ್ಯಾಕ್ಟರ್‌ಗಳು ಮಾರಾಟವಾಗಿವೆ ಎಂದು ತಿಳಿಸಿದೆ.
‘ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಎಲ್ಲ ವಹಿವಾಟುಗಳು ಬೆಳವಣಿಗೆ ದಾಖಲಿಸಿವೆ. ಹೆಚ್ಚಿದ ವಾಹನಗಳ ಮಾರಾಟ ಮತ್ತು ಕೃಷಿ ವಹಿವಾಟು ಲಾಭದ ಹೆಚ್ಚಳಕ್ಕೆ ಕಾರಣವಾಗಿವೆ’ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನೀಶ್ ಶಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.