ADVERTISEMENT

ನಾಗ್ಪುರದಲ್ಲಿ ಮಣಿಪಾಲ್‌ ಹಾಸ್ಪಿಟಲ್ಸ್‌ನಿಂದ ಆಸ್ಪತ್ರೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 14:30 IST
Last Updated 13 ಆಗಸ್ಟ್ 2025, 14:30 IST
Manipal Hospitals logo
Manipal Hospitals logo   

ಬೆಂಗಳೂರು: ದೇಶದ ಮುಂಚೂಣಿ ಆರೋಗ್ಯಸೇವಾ ಕಂಪನಿಗಳ ಪೈಕಿ ಒಂದಾಗಿರುವ ಮಣಿಪಾಲ್‌ ಹಾಸ್ಪಿಟಲ್ಸ್‌, ನಾಗ್ಪುರದಲ್ಲಿ 350 ಹಾಸಿಗೆಗಳ ಅತ್ಯಾಧುನಿಕ ಮಲ್ಟಿ–ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮಹಾರಾಷ್ಟ್ರ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ.

ಪ್ರಸ್ತಾವಿತ ಈ ಆಸ್ಪತ್ರೆಗಾಗಿ ₹700 ಕೋಟಿ ಹೂಡಿಕೆ ಮಾಡಲಾಗುತ್ತದೆ. ಇದು ಹೊಸದಾಗಿ ಮೂರು ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಈ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲ ಪರವಾನಗಿಗಳನ್ನು, ಅನುಮೋದನೆಗಳನ್ನು ಹಾಗೂ ಹಣಕಾಸಿನ ನೆರವನ್ನು ಒದಗಿಸುವುದಾಗಿ ಮಹಾರಾಷ್ಟ್ರ ಸರ್ಕಾರವು ಭರವಸೆ ಇತ್ತಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಆಸ್ಪತ್ರೆಯು 2029ರಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.

ADVERTISEMENT

‘ನಾಗ್ಪುರದಲ್ಲಿನ ಹೊಸ ಆಸ್ಪತ್ರೆಯು ಅತ್ಯುತ್ತಮ ಗುಣಮಟ್ಟದ ಆರೋಗ್ಯಸೇವೆಯನ್ನು ಅದರ ಅಗತ್ಯ ಇರುವ ಸಮುದಾಯಗಳಿಗೆ ಹತ್ತಿರ ತರಲಿದೆ’ ಎಂದು ಮಣಿಪಾಲ್ ಹಾಸ್ಪಿಟಲ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ದಿಲೀಪ್ ಜೋಸ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.