ADVERTISEMENT

ತಯಾರಿಕಾ ಚಟುವಟಿಕೆ ಇಳಿಕೆ

ಪಿಟಿಐ
Published 1 ಜೂನ್ 2020, 16:09 IST
Last Updated 1 ಜೂನ್ 2020, 16:09 IST

ನವದೆಹಲಿ : ದೇಶದ ತಯಾರಿಕಾ ವಲಯದ ಚಟುವಟಿಕೆಗಳು ಮೇ ತಿಂಗಳಿನಲ್ಲಿ ಇಳಿಕೆ ಕಂಡಿವೆ ಎಂದು ಐಎಚ್‌ಎಸ್‌ ಮರ್ಕಿಟ್‌ ಇಂಡಿಯಾ ಹೇಳಿದೆ.

ಐಎಚ್‌ಎಸ್‌ ಮರ್ಕಿಟ್‌ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್‌ ಪರ್ಸೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ ಮೇನಲ್ಲಿ 30.8ರಷ್ಟಾಗಿದೆ. ಏಪ್ರಿಲ್‌ನಲ್ಲಿ 27.4 ಇತ್ತು.

ಲಾಕ್‌ಡೌನ್‌ನಿಂದಾಗಿ ತಯಾರಿಕಾ ಚಟುವಟಿಕೆಗಳು ಕುಸಿತ ಕಂಡಿದ್ದು, ಚೇತರಿಸಿಕೊಳ್ಳಲು ಹಲವು ಸವಾಲುಗಳನ್ನು ಎದುರಿಸಬೇಕಾಗಲಿದೆ ಎಂದು ಹೇಳಿದೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿಯೂ ಬೇಡಿಕೆ ಇಲ್ಲದಿರುವುದು, ದೇಶಿ ಮಾರುಕಟ್ಟೆಯಲ್ಲಿ ಕುಸಿದಿರುವ ಮಾರಾಟವು ತಯಾರಿಕಾ ಚಟುವಟಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.